ಹಿಮಾಚಲದಲ್ಲಿ ಧರೆಗುರುಳಿದ 7 ಬಹುಮಹಡಿ ಕಟ್ಟಡಗಳು
ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿದಲ್ಲಿ 7 ಬಹುಮಹಡಿ ಕಟ್ಟಡಗಳು ಧರೆಗುರುಳಿದ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ಸಂಭವಿಸಿದ್ದು, ಈ ವೀಡಿಯೋ ವೈರಲ್ ಆಗಿದೆ.
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮತ್ತೆ ಸುರಿದ ಭಾರೀ ಮಳೆ ಹಾಗೂ ಭೂಕುಸಿತದಿಂದ 13 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ.
ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ್ ರಾಜ್ಯಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಿಸಿದೆ. ಹಿಮಾಚಲ ಪ್ರದೇಶದ ೬ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಮೇಘಸ್ಫೋಟ ಸಂಭವಿಸಿದ್ದರಿಂದ ಹಿಮಾಚಲ ಪ್ರದೇಶವೊಂದರಲ್ಲೇ ಕಳೆದ ೨೪ ಗಂಟೆಯಲ್ಲಿ 13 ಮಂದಿ ಸಾವಿಗೀಡಾಗಿದ್ದರೆ, ಉತ್ತರಾಖಂಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಕಂಗ್ರಾ, ಕುಲು, ಮಂಡಿ, ಶಿಮ್ಲಾ, ಸೋಲಾನ್ ಮತ್ತು ಸಿರ್ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕುಲು ಜಿಲ್ಲೆಯಲ್ಲಿ ನೂರಾರು ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿವೆ.