December 23, 2024

ನಾಳೆ ಇಸ್ರೋಗೆ ಪ್ರಧಾನಿ ಮೋದಿ ಭೇಟಿ

ನಾಳೆ ಬೆಂಗಳೂರಿನಲ್ಲಿರುವ ಇಸ್ರೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 4.30ರಿಂದ ಬೆಳಗ್ಗೆ 9.30ರವರೆಗೆ ಸಂಚಾರ ಬದಲಾವಣೆ ಮಾಡಲಾಗಿದೆ. ಹಳೇ ಏರ್​​ಪೋರ್ಟ್​ ರಸ್ತೆ, ಹಳೇ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ, ಸಿ.ವಿ.ರಾಮನ್ ರಸ್ತೆ, ಯಶವಂತಪುರ ಫ್ಲೈಓವರ್, ತುಮಕೂರು ರಸ್ತೆ ಮಾಗಡಿ ರಸ್ತೆ, ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್‌ ರಸ್ತೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ನಾಳೆ ಬೆಳಗ್ಗೆ 4ರಿಂದ ಬೆಳಗ್ಗೆ 11ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ನಗರ ಪೊಲೀಸರ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *