ಹಿರಿಯ ನಟಿ ವಹಿದಾ ರೆಹಮಾನ್ ಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
ಬಾಲಿವುಡ್ ಹಿರಿಯ ನಟಿ ವಹಿದಾ ರೆಹಮಾನ್ ಗೆ ಜೀವಮಾನದ ಸಾಧನೆಗಾಗಿ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದಿದೆ.
ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅನುರಾಗ್ ಠಾಕೂರ್ ಮಂಗಳವಾರ ಈ ವಿಷಯ ಘೊಷಿಸಿದ್ದಾರೆ.
5 ದಶಕಗಳ ಕಾಲ ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ವಹಿದಾ ರೆಹಮಾನ್ ಅವರನ್ನು ಆಯ್ಕೆ ಮಾಡಲಾಗಿದೆ.
ಈಗಾಗಲೇ ತಮ್ಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ವಹಿದಾ ರೆಹಮಾನ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳು ಒಲಿದಿವೆ.