ವೋಲ್ವೋ ಬಸ್‌ಗಳತ್ತ ಮುಖ ಮಾಡಿದ ಪುರುಷ ಪ್ರಯಾಣಿಕರು
ಶಕ್ತಿ ಯೋಜನೆ ಜಾರಿಗೆ ಬಂದಮೇಲೆ ಐಷಾರಾಮಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿತ್ತು.
ಇದರಿಂದಾಗಿ ಐಷಾರಾಮಿ ಬಸ್ ಮತ್ತು ವೋಲ್ವೋ ಬಸ್‌ಗಳಿಗೆ ಪ್ರಯಾಣಿಕರ ಸಂಖ್ಯೆ ಇಳಿಕೆಯ ಆತಂಕ ವ್ಯಕ್ತವಾಗಿತ್ತು. ಸಾಮಾನ್ಯ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿರುವುದರಿಂದ ಪುರುಷ ಪ್ರಯಾಣಿಕರು ವೋಲ್ವೋ ಬಸ್‌ಗಳತ್ತ ಮುಖ ಮಾಡಿದ್ದಾರೆ.
ಹೀಗಾಗಿ ದಿನನಿತ್ಯದ ಪ್ರಯಾಣಿಕರ ಸಂಖ್ಯೆಯಲ್ಲಿ 10,000 ಪ್ರಯಾಣಿಕರ ಸಂಖ್ಯೆ ಹೆಚ್ಚಳ ಆಗಿದೆ.