ಒಂದೇ ವರ್ಷದಲ್ಲಿ 2 ಡೈಮಂಡ್ ಲೀಗ್ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ 87.66 ಮೀಟರ್ ದೂರ ಜಾವೆಲಿನ್ ಎಸೆತ

87.66 ಮೀಟರ್ ದೂರ ಜಾವೆಲಿನ್ ಎಸೆದು ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ.
ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ಗಮನ ಸೆಳೆದಿದ್ದ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಸ್ವಿಜರ್ಲೆಂಡ್ನಲ್ಲಿ ನಡೆದ ಪ್ರತಿಷ್ಠಿತ ಲಾಸೆನ್ ಡೈಮಂಡ್ ಲೀಗ್ ಸ್ಪರ್ಧೆಯಲ್ಲಿ ಸ್ವರ್ಣ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. 87.66 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಒಂದೇ ವರ್ಷದಲ್ಲಿ ಎರಡು ಡೈಮಂಡ್ ಲೀಗ್ ಗೆದ್ದ ಕೀರ್ತಿಗೆ ಪಾತ್ರರಾಗಿದ್ದಾರೆ.