December 22, 2024

ಒಂದು ದೇಶ, ಒಂದು ಚುನಾವಣೆ

ಒಂದು ದೇಶ, ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದ ಸಮಿತಿ ರಚನೆ.
ಒಂದು ದೇಶ ಒಂದು ಚುನಾವಣೆಯ ಸಾಧಕ ಬಾಧಕಗಳ ಪರಿಶೀಲನೆಗೆ ಕೇಂದ್ರ ಸರಕಾರ ಮಾಜಿ ರಾಷ್ಟ್ರಪತಿ ರಾಮನಾಥನ್‌ ಕೋವಿಂದ್‌ ನೇತೃತ್ವದ ಸಮಿತಿ ರಚಿಸಿದೆ.
ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವ ಮೂಲಕ ಒಂದು ರಾಷ್ಟ್ರ, ಒಂದು ಚುನಾವಣೆ ನಡೆಸುವ ಯೋಜನೆ ಕುರಿತು ಕೇಂದ್ರ ಸರಕಾರ ವಿಶೇಷ ಅಧಿವೇಶನ ಕರೆದ ಬೆನ್ನಲ್ಲೇ ಸಮಿತಿ ರಚಿಸಿ ಅಚ್ಚರಿ ಮೂಡಿಸಿದೆ.
ಸೆಪ್ಟೆಂಬರ್‌ 18ರಿಂದ 22ರವರೆಗೆ ನಡೆಯಲಿರುವ ವಿಶೇಷ ಸಂಸತ್‌ ಅಧಿವೇಶನದಲ್ಲಿ ಒಂದು ದೇಶ, ಒಂದು ಚುನಾವಣೆ ಕುರಿತು ಮಸೂದೆ ಮಂಡನೆ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಸರಕಾರ ಯಾವುದೇ ಅಧಿಕೃತ ಮಾಹಿತಿ ಬಹಿರಂಗಪಡಿಸಿಲ್ಲ.
1967ರವರೆಗೆ ದೇಶದಲ್ಲಿ ಒಂದೇ ಬಾರಿಗೆ ಚುನಾವಣೆ ನಡೆಯುತ್ತಿತ್ತು. ಆದರೆ ರಾಜಕೀಯ ಲಾಭಕ್ಕಾಗಿ ಕೆಲವು ಪಕ್ಷಗಳು ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಿದವು. ನಂತರ ಒಂದೊಂದು ರಾಜ್ಯದಲ್ಲಿ ಒಂದೊಂದು ಬಾರಿ ಚುನಾವಣೆ ನಡೆಯುವಂತಾಗಿದೆ. ಇದರಿಂದ ಚುನಾವಣಾ ವೆಚ್ಚದಲ್ಲೂ ಏರಿಕೆಯಾಗುತ್ತಿದೆ.
ದೇಶದಲ್ಲಿ ಒಂದೇ ಬಾರಿಗೆ ಲೋಕಸಭೆ ಮತ್ತು ವಿಧಾನಸಭೆಚುನಾವಣೆ ನಡೆಸುವ ಮಸೂದೆ ಜಾರಿಗೆ ತರಲು ಕೇಂದ್ರ ಸರಕಾರ ಉದ್ದೇಶಿಸಿದ್ದು, ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದರೂ ಏಕಾಭಿಪ್ರಾಯ ವ್ಯಕ್ತವಾಗಿಲ್ಲ.

Leave a Reply

Your email address will not be published. Required fields are marked *