February 4, 2026

2024ರ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ

BJP - JDS Coalition for Lok Sabha Elections


2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಡುವಿನ ಮಾತುಕತೆ ಯಶಸ್ವಿಯಾಗಿದ್ದು, ಕರ್ನಾಟಕದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಮಾಡಿಕೊಳ್ಳಲಿವೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಪಕ್ಷಗಳು ಜೊತೆಯಾಗಿ ಕರ್ನಾಟಕದಲ್ಲಿ ಕಣಕ್ಕಿಳಿಯಲಿದೆ ಎಂದರು.
ರಾಜ್ಯದಲ್ಲಿ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಬಿಜೆಪಿ ಸಮ್ಮತಿ ಸೂಚಿಸಿದೆ. ಮಾತುಕತೆ ವೇಳೆ ಜೆಡಿಎಸ್‌ ಪ್ರಾಬಲ್ಯ ಇರುವ ೬ ಕ್ಷೇತ್ರಗಳ ಪೈಕಿ ೪ ಕ್ಷೇತ್ರಗಳನ್ನು ಬಿಟ್ಟುಕೊಡಲು ಅಮಿತ್‌ ಶಾ ಒಪ್ಪಿದ್ದಾರೆ ಎಂದು ಅವರು ಹೇಳಿದರು.
ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೋರ್ಟ್‌ ತೀರ್ಪು ಬಂದ ಹಿನ್ನೆಲೆಯಲ್ಲಿ ವಕೀಲರನನು ಭೇಟಿ ಮಾಡು ದೇವೇಗೌಡರು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಅಮಿತ್‌ ಶಾ ಅವರನ್ನು ಗೌಪ್ಯ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್‍ಗೆ ಹೆಚ್ಚು ಶಕ್ತಿಯಿದೆ. ಈ ಭಾಗದಲ್ಲಿ ಬಿಜೆಪಿ ಕೈ ಜೋಡಿಸಬೇಕು. ಉಳಿದ ಕಡೆ ನಿಮಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ. ದೇವೇಗೌಡರ ಬೇಡಿಕೆಗೆ ಒಪ್ಪಿಗೆ ಸಿಕ್ಕಿದರೆ ಸೆ.10ರ ಸಮಾವೇಶದ ಬಳಿಕ ಜೆಡಿಎಸ್ ತನ್ನ ನಿರ್ಧಾರ ಪ್ರಕಟವಾಗಲಿದೆ.

Leave a Reply

Your email address will not be published. Required fields are marked *