ಸೋಶಿಯಲ್ ಮೀಡಿಯಾ ಬಳಕೆ ಕನಿಷ್ಠ ವಯೋಮಿತಿ ಜಾರಿಗೆ ಹೈಕೋರ್ಟ್ ಸಲಹೆ
ಬೆಂಗಳೂರು: ಸೋಶಿಯಲ್ ಮೀಡಿಯಾ ಬಳಕೆಗೆ ಕನಿಷ್ಠ ವಯೋಮಿತಿ ಜಾರಿ ಮಾಡುವ ಮೂಲಕ ಶಾಲೆಗೆ ಹೋಗುವ ಮಕ್ಕಳನ್ನು ಅವುಗಳಿಂದ ದೂರವಿಡುವುದು ಉತ್ತಮ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಶಾಲೆಗೆ ಹೋಗುವ ಮಕ್ಕಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಕ್ಕೆ ದಾಸರಾಗಿದ್ದಾರೆ ಎಂಬ ವಿಚಾರವನ್ನು ಗಮನಿಸಿದ ಪೀಠ, ಶಾಲೆಗೆ ಹೋಗುವ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ನಿಷೇಧ ಮಾಡಿದರೆ ಅದು ದೇಶಕ್ಕೆ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.
ಶಾಲೆಗೆ ಹೋಗುವ ಮಕ್ಕಳೂ ಸಾಮಾಜಿಕ ಮಾಧ್ಯಮಗಳಿಗೆ ಸಾಮಾಜಿಕ ಜಾಲತಾಣ ಬಳಕೆ ಮಾಡಲು ವಯೋಮಿತಿ ನಿಗದಿ ಮಾಡಲು ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕವಾಗಿ ಸಲಹೆ ನೀಡಿದೆ.
ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ 2021ರ ಫೆ.ಮತ್ತು 2022ರ ಅವಧಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಆಕ್ಷೇಪಿಸಿ ಟ್ವಿಟರ್ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಕ್ಸ್ ಕಾರ್ಪ್ (ಹಿಂದಿನ ಟ್ವಿಟರ್) ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.