ಸಿಎಂ ಇಬ್ರಾಹಿಂ “ಕಾಲಾಯ ತಸ್ಮೈ ನಮಃ “ಎಂದಿದ್ಯಾಕೆ
1 min readಬೆಂಗಳೂರು: ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಘೋಷಣೆಯಾದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಈ ಬೆಳವಣಿಗೆ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ನಿಮ್ಮ ಮುಂದಿನ ನಿರ್ಧಾರವೇನು ಎನ್ನುವ ಮಾಧ್ಯಮದವರ ಪ್ರಶ್ನೆಗೆ, ಕಾಲಾಯ ತಸ್ಮೈ ನಮಃ ಎಂದು ಪ್ರತಿಕ್ರಿಯಿಸಿರುವ ಇಬ್ರಾಹಿಂ,
ಕಾಲವೇ ಎಲ್ಲವನ್ನೂ ನಿರ್ಧಾರ ಮಾಡುತ್ತದೆ. ಮೈತ್ರಿ ವಿಚಾರವಾಗಿ ಜೆಡಿಎಸ್ ಪಕ್ಷದ ನಾಯಕರು ಬಿಜೆಪಿಯ ಬಳಿ ಹೋಗಿದ್ದು, ತಪ್ಪು, ಅವರೇ ನಮ್ಮ ಬಳಿ ಬರಬೇಕಿತ್ತು ಎಂದು ಹೇಳಿದ್ದಾರೆ.
ಮೈತ್ರಿ ಆದ ಬಳಿಕ ಕುಮಾರಸ್ವಾಮಿ ನನ್ನ ಜೊತೆ ಇಲ್ಲಿಯವರೆಗೂ ಮಾತನಾಡಿಲ್ಲ. ದೆಹಲಿಗೆ ಹೋಗ್ತಿದ್ದೇವೆ ಅಂತ ನನಗೆ ಒಂದು ಮಾತು ಹೇಳಿಲ್ಲ. ಏನು ಚರ್ಚೆ ಮಾಡಿದ್ದಾರೆ ಅನ್ನೋದನ್ನೂ ಹೇಳಿಲ್ಲ. ಮೈತ್ರಿ ಮಾಡಿಕೊಂಡಿರುವುದನ್ನು ಪಕ್ಷದ ಅಧ್ಯಕ್ಷನಾಗಿರುವ ನನಗೇ ಹೇಳಿಲ್ಲ. ಪಕ್ಷದ ತೀರ್ಮಾನ ಅಂತ ಹೇಳಲು ಪಕ್ಷದ ಮಟ್ಟದಲ್ಲಿ ಚರ್ಚೆ ಆಗಬೇಕು. ಪಕ್ಷದ ಮಟ್ಟದಲ್ಲಿ ಚರ್ಚೆ ಆಗಿ ನಾನು ಸಹಿ ಹಾಕಬೇಕು. ಕೋರ್ ಕಮಿಟಿ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ ಅಂದಿದ್ದರು. ಆದರೆ ನನ್ನ ಜತೆ ಮಾತನಾಡಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಜೆಡಿಎಸ್‌ನಲ್ಲಿಯೇ ಉಳಿಯುತ್ತೀರಾ ಎನ್ನುವ ಪ್ರಶ್ನೆಗೆ, 16ರಂದು ನನ್ನ ನಿರ್ಧಾರ ಪ್ರಕಟಿಸುತ್ತೇನೆ. ಹೈಕಮಾಂಡ್ ನಾಯಕರು ಮಾತನಾಡಿದ್ದಾರೆ ಎಂದು ಉತ್ತರಿಸಿದ್ದಾರೆ.